dcsimg

ಈಶ್ವರ ಬಳ್ಳಿ ( kannara )

fourni par wikipedia emerging languages

ಸಂ : ನಕುಲಿ, ರುದ್ರಜಿಟಾ

ಹಿಂ : ಈಶ್ವರಿಮೂಲ್

ಗು : ರುಹಿಮೂಲ್

ಮ : ಸಪಾಸನ್

ತೆ : ದುಲಗವೇಲ

ತ : ಪೆರಂಕಳಿಂಗ್

ವರ್ಣನೆ

ಸಾಮಾನ್ಯವಾಗಿ ಈಶ್ವರಬಳ್ಳಿ ಹಳ್ಳಿಗರಿಗೆ ಚಿರಪರಿಚತವಾಗಿರುವುದು. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಇದು ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ. ಇದರ ಬೇರುಗಳಲ್ಲಿ ಸುಗಂಧ ತೈಲವಿರಿತ್ತದೆ.

ಹಂಚಿಕೆ

ಈಶ್ವರ ಬಳ್ಳಿಯು ಭಾರತ, ನೇಪಾಳ, ಶ್ರೀಲಂಕಾ, ಬಾಂಗ್ಲಾದೇಶಗಳಲ್ಲಿ ಕಂಡುಬರುತ್ತದೆ[೧].

ಸರಳ ಚಿಕಿತ್ಸೆಗಳು

ಜ್ವರ ಮತ್ತು ಕೆಮ್ಮು ನಿವಾರಣೆಗೆ

ಈಶ್ವರಬಳ್ಳಿಯ ಬೇರನ್ನು ನಯವಾದ ಚೂರ್ಣ ಮಾಡಿ, ೧/೪ ಟೀ ಚಮಚ ಚೂರ್ಣವನ್ನು ನೀರಿನಲ್ಲಿ ನೆನೆ ಹಾಕಿ ಕಷಾಯಮಾಡಿ ಶೋಧಿಸಿ ೩-೪ ಟೀ ಚಮಚದಷ್ಟು ದಿವಸಕ್ಕೆ ಎರಡು ಸೇವಿಸಿದರೆ ಜ್ವರ ಮತ್ತು ಕೆಮ್ಮು ನಿವಾರಣೆಯಾಗುತ್ತದೆ.

ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆಗೆ

ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ಚೂರ್ಣಿಸಿ, ಈ ನಯವಾದ ಚೂರ್ಣವನ್ನು ೨ ರಿಂದ ೨.೫ ಗ್ರಾಂ ಸೇವಿಸಿದ ಮೇಲೆ ಬಿಸಿನೀರು ಕುಡಿಯುವುದು.

ವಿಷಮ ಜ್ವರ, ಸನ್ನಿ ಜ್ವರದ ನಿವಾರಣೆಗೆ

ಶುದ್ಧವಾದ ೧/೨ ಲೀಟರ್ ತಣ್ಣೀರಿನಲ್ಲಿ ೧೫ಗ್ರಾಂ ಈಶ್ವರಿಬೇರು ಜಜ್ಜಿ ಹಾಕಿ ನೆನೆಸಿಡುವುದು. ತಿಳಿಯಾದ ನೀರನ್ನು ಶೋಧಿಸಿ, ಒಂದೆರಡು ಟೀ ಚಮಚ ದಿವಸಕ್ಕೆ ೪-೫ ಬಾರಿ ಸೇವಿಸಿದರೆ ವಿಷಮ ಜ್ವರ ಗುಣಮುಖವಾಗುತ್ತದೆ.

ಹಾವಿನ ವಿಷ, ಸರ್ಪದ ವಿಷದ ನಿವಾರಣೆಗೆ

ಸರ್ಪದ ವಿಷ ನಿವಾರಣೆಗೆ ಇದರ ಎಲೆಯ ಕಷಾಯ ಮಾಡಿ ಸೇವಿಸುತ್ತಾರೆ. ಹಾವಿನ ವಿಷ ನಿವಾರಣೆಗೆ ೨ಗ್ರಾಂ ಇದರ ಹಸಿ ಎಲೆಗಳು, ೨ಗ್ರಾಂ ಮೆಣಸು ನುಣ್ಣಗೆ ಅರೆದು ಗಾಯದ ಮೇಲೆ ಮಂದವಾಗಿ ಲೇಪಿಸುತ್ತಾರೆ.

ದೃಷ್ಟಿ ದೋಷ ನಿವಾರಣೆಗೆ

ಇದರ ಬೇರಿನ ನಯವಾದ ಚೂರ್ಣಮಾಡಿ, ಸ್ವಲ್ಪ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.

ಮುಟ್ಟಿನ ದೋಷ ನಿವಾರಣೆಗೆ

ಇದರ ಬೇರಿನ ನಯವಾದ ಚೂರ್ಣಮಾಡಿ, ಕಡಿಮೆ ಪ್ರಮಾಣದಲ್ಲಿ ಬೆಲ್ಲ ಅಥವಾ ನಿಂಬೆರಸದ ಅನುಪಾನದೊಂದಿಗೆ ಸೇವಿಸಿದರೆ ಮುಟ್ಟಿನ ದೋಷ ನಿವಾರಣೆಯಾಗುತ್ತದೆ.[೨]

ಉಲ್ಲೇಖ

  1. http://envis.frlht.org/medicinal_search.php?s1=Continue&txtbtname=&ver=224%7CAristolochia+indica+L.&emailid=&Join=Join
  2. ಅಪೂರ್ವ ಗಿಡಮೂಲಿಕೆಗಳು ಮತ್ತು ಸರಳಚಿಕಿತ್ಸೆಗಳು, ವೈದ್ಯ: ಎ. ಆರ್. ಎಂ. ಸಾಹೇಬ್ ವಲಯಾರಣ್ಯಾಧಿಕಾರಿಗಳು, ಪ್ರಕಾಶಕರು ದಿವ್ಯಚಂದ್ರ ಪ್ರಕಾಶನ, ಪುಟ ಸಂಖ್ಯೆ-೫೦

ಬಾಹ್ಯಸಂಪರ್ಕ

licence
cc-by-sa-3.0
droit d’auteur
ವಿಕಿಪೀಡಿಯ ಲೇಖಕರು ಮತ್ತು ಸಂಪಾದಕರು

ಈಶ್ವರ ಬಳ್ಳಿ: Brief Summary ( kannara )

fourni par wikipedia emerging languages

ಸಂ : ನಕುಲಿ, ರುದ್ರಜಿಟಾ

ಹಿಂ : ಈಶ್ವರಿಮೂಲ್

ಗು : ರುಹಿಮೂಲ್

ಮ : ಸಪಾಸನ್

ತೆ : ದುಲಗವೇಲ

ತ : ಪೆರಂಕಳಿಂಗ್

licence
cc-by-sa-3.0
droit d’auteur
ವಿಕಿಪೀಡಿಯ ಲೇಖಕರು ಮತ್ತು ಸಂಪಾದಕರು